ಬೆಳಗಾವಿ: ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಹಾಗೂ ಕೇಂದ್ರ ಸರಕಾರದ ಕೃಷಿ ಮತ್ತು ಕಾರ್ಮಿಕ ಸಂಬಂಧಿತ ಕಾಯ್ದೆ ವಿರೋಧಿಸಿ ಸೋಮವಾರ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ ಸಂಘಟನೆಗಳು, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. …
Read More »