ಬೆಂಗಳೂರು: ಕೋವಿಡ್ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ …
Read More »