ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಸುನ್ನಿ ವಕ್ಫ್ ಮಂಡಳಿಗೆ ನೀಡಿದ್ದ ಐದು ಎಕರೆ ಭೂಮಿ ನಮ್ಮದು ಎಂದು ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯದ ನೋಂದಾವಣೆಯಲ್ಲಿ ದಾಖಲಿಸಲಾಗಿದ್ದು, ಫೆಬ್ರವರಿ 8 ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ತಮ್ಮ ತಂದೆ ಜ್ಞಾನ ಚಂದ್ರ ಪಂಜಾಬಿ …
Read More »