ನವದೆಹಲಿ, ಆ.14- ಕೊರೊನಾ ಆತಂಕದ ನಡುವೆಯೂ ನಾಳೆ ದೇಶಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಭೂತಪೂರ್ವ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಭಯೋತ್ಪಾದಕ ಸಂಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಎಚ್ಚರಿಕೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.
ದೆಹಲಿ ಕೆಂಪುಕೋಟೆ ಪ್ರದೇಶದಲ್ಲಿ 300 ಕ್ಯಾಮೆರಾಗಳು, 4 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅದಕ್ಕಿಂತ ಮುಖ್ಯವಾಗಿ ಕೊರೊನಾ ಹೆಮ್ಮಾರಿ ಇರುವ ಕಾರಣ ಮತ್ತಷ್ಟು ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಳಿನ ಸ್ವಾತಂತ್ರೋತ್ಸವಕ್ಕೆ ಪೂರ್ವ ತಯಾರಿ ಮಾಡಿಕೊಂಡಿದೆ, ಕವಾಯತು ಪಡೆಗಳು ಮಾಸ್ಕ್ ಧರಿಸಿಯೇ ಪೂರ್ವ ತಾಲೀಮು ನಡೆಸಿವೆ. ಸೇನಾ ಪಡೆಗಳು ನಾಳೆ ಗಾಳಿಯಲ್ಲಿ 21 ಸುತ್ತು ಗುಂಡು ಹಾರಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ವಂದನೆ ಸಲ್ಲಿಸಲಿದೆ.
Areಬಳಿಕ ಪ್ರಧಾನಿ ಧ್ವಜಾರೋಹಣ ಮಾಡಲಿದ್ದು, ರಾಷ್ಟ್ರಗೀತೆ ಹಾಡಿದ್ದಾರೆ. ಬಳಿಕವಷ್ಟೇ ದೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಬಾರಿ ಕೊರೊನಾ ಇರುವ ಕಾರಣ ಕೊರೊನಾ, ಸ್ವಚ್ಛತೆ, ಸೇನಾಪಡೆಗಳ ಬಲವರ್ಧನೆ, ರಾಮಮಂದಿರ ಕುರಿತಂತೆ ಹೆಚ್ಚಿನ ಮಾತು ಇರಲಿದೆ ಎಂದು ಹೇಳಲಾಗುತ್ತಿದೆ.
ಕೆಂಪುಕೋಟೆ ಆವರಣವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಯ್ದ ಕೆಲವರಿಗಷ್ಟೇ ಆಹ್ವಾನ ನೀಡಲಾಗಿದೆ. ಕೇವಲ ಕೊರೊನಾ ವಾರಿಯಸ್‌ರ್ಗಳಾದ ವೈದ್ಯರು, ನಸ್‌ರ್ಗಳು ಹಾಗೂ ಕೊರೊನಾ ಗೆದ್ದ ಕೆಲವು ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ. ಇವರೆಲ್ಲರೂ ಪಿಪಿಇ ಕಿಟ್ ಧರಿಸಿರುತ್ತಾರೆ.
ದೇಶದಲ್ಲಿ ಕೋವಿಡ್ ಮಾರಿ ಇರುವುದರಿಂದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ರೆಡ್ ಫೋಟೋ ಎರಡು ಕಡೆ ಮೈದಾನಗಳು ಮುಚ್ಚಲ್ಪಟ್ಟಿರುತ್ತವೆ. ಕೇವಲ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಬಹುದು. ಇವರೆಲ್ಲರಿಗೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.
ರಾಜ್ಯದಲ್ಲೂ ವಿಭಿನ್ನ ಸ್ವಾತಂತ್ರ್ಯೋತ್ಸವ:
ರಾಜ್ಯದಲ್ಲೂ ಕೂಡ ಕೊರೊನಾ ಮಾರ್ಗಸೂಚಿ ಅನುಸಾರ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಕೇಂದ್ರ ಸರ್ಕಾರದ ಆದೇಶದಂತೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶವಿರುವುದಿಲ್ಲ. ಹೆಚ್ಚು ಜನರು ಒಂದೆಡೆ ಸೇರಲು ಅವಕಾಶವಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಡಿಸಿಪಿ ಸಿ.ಆರ್. ಗಿರೀಶ್ ಪೆರೇಡ್ ನೇತೃತ್ವ ವಹಿಸಲಿದ್ದು, ಪೆರೇಡ್ ನಲ್ಲಿ ಟ್ರಾಫಿಕ್ ಪೊಲೀಸ್, ಕೆಎಸ್‌ಆಕ್ಷಿ, ಬಿ.ಎಸ್.ಎಫ್, ಸಿಎಆರ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾಡ್ ಸೇರಿದಂತೆ 16 ತುಕಡಿಗಳಿಗೆ 350 ಮಂದಿ ಭಾಗವಹಿಸುತ್ತಾರೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್‌ಪಂಥ್ ಒಂಬತ್ತು ಮಂದಿ ಡಿಸಿಪಿ ಸೇರಿದಂತೆ 680 ಜನ ಭದ್ರತಾ ಕೆಲಸದಲ್ಲಿ ತೊಡಗಿರುತ್ತಾರೆ. ಸ್ವಾತಂತ್ರ್ಯ ದಿನಾಚರಣೆ ವೀಕ್ಷಿಸಲು 500 ಆಸನಗಳ ವ್ಯವಸ್ಥೆ ಮಾಡಲಾಗಿದೆ.
ವಿವಿದ ಇಲಾಖೆಯ ಕೋವಿಡ ವಾರಿಯರ್ಸ 100 సిబ్బంది ಕೋವಿಡ್‌ನಿಂದ ಗುಣಮುಖರಾದ ಎಲ್ಲಾ ವಯೋಮಾನದ 25 25 ಜನರನ್ನು ಮಾತ್ರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನ ಹಾಗೂ ವೆಬ್ ಕಾಸ್ಟ್ ಮೂಲಕ ಪ್ರಸಾರ ಮಾಡಲಾಗುತ್ತದೆ.