Breaking News

ಜಿಲ್ಲಾಧಿಕಾರಿಗಳಿಂದ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ, ಪರಿಶೀಲನೆ

ವಿಜಯಪುರ : ನಗರದ ಅಲ್-ಅಮೀನ್ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಇಂದು ಭೇಟಿ ನೀಡಿ ಕೋವಿಡ್ -೧೯ ಲಸಿಕಾ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದರು.

ನಗರದ ಅಲ್-ಅಮೀನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಕೋವಿಡ್-೧೯ ಲಸಿಕಾ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ಮುಂದುವರೆಸಿಕೊAಡು ಹೋಗುವಂತೆ ತಿಳಿಸಿದ ಅವರು ಕೋವಿಡ್-೧೯ ಲಸಿಕೆ ಬಗ್ಗೆ ಇರುವಂತಹ ತಪ್ಪು ಕಲ್ಪನೆಗಳನ್ನು ನಿವಾರಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.
ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕೋವಿಡ್-೧೯ ಲಸಿಕಾ ಕಾರ್ಯಕ್ರಮದ ಬಗ್ಗೆ ಪರಿಶೀಲನೆ ನಡೆಸಿ ಸಂಬAಧಿಸಿದ ವೈದ್ಯರು, ಆರೋಗ್ಯ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್-೧೯ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಡಬ್ಲೂಂ ಎಚ್‌ಒ ಪ್ರತಿನಿಧಿ ಮುಕುಂದ ಗಲಗಲಿ ಅವರು ಕೋವಿಡ್-೧೯ ಲಸಿಕಾ ಕಾರ್ಯಕ್ರಮದ ಮಹತ್ವದ ಬಗ್ಗೆ ವಿವರಿಸಿದರು. ಅದರಂತೆ ನಗರದ ಲುಕ್ಮಾನ್ ಯುನಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಹಶೀಲ್ದಾರ ಶ್ರೀಮತಿ ಮೋಹನಕುಮಾರಿ ಅವರು ಭೇಟಿ ನೀಡಿ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕೋವಿಡ್-೧೯ (ಕೋವಿಶೀಲ್ಡ್) ಲಸಿಕಾ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಮಹೇಶ ನಾಗರಬೆಟ್ಟ, ಅಲ್-ಅಮೀನ್ ಆಸ್ಪತ್ರೆಯಲ್ಲಿ ಡೀನ್ ಸಲೀಮ್ ದುಂಡಸಿ, ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಅಧೀಕ್ಷಕ ರಾಜೇಶ ಹೊನ್ನುಟಗಿ, ನೋಡಲ್ ಅಧಿಕಾರಿ ಶ್ರೀ ಯಡವಣ್ಣನವರ ಅವರು ಉಪಸ್ಥಿತರಿದ್ದರು.

About vijay_shankar

Check Also

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.