ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇಂದು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಉಪಚಾರ ಫಲಿಸದೆ ಇಂದು ನಿಧನರಾಗಿದ್ದಾರೆ. ಈ ಕುರಿತು ಅವರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ. 8 ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೆ ರಾಮ್ ವಿಲಾಸ್ ಪಾಸ್ವಾನ್ ಹಲವು
ಬಾರಿ ಕೇಂದ್ರದಲ್ಲಿ ಸಚಿವರಾಗಿದ್ದರು. ದಲಿತ ನಾಯಕರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಬಿಹಾರದ ಪ್ರಭಾವಿ ರಾಜಕಾರಣಿಯಾಗಿದ್ದರು .
ಸಂತಾಪ :- ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ನಿತಿನ್ ಗಡ್ಕರಿ , ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೆಪಿಸಿಸಿ ಮಾಜಿ ಅಧ್ಯಕ್ಷ ಸೇರಿದಂತೆ ಹಲವು ಗಣ್ಯರು ರಾಮ್ವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News